HomeEntertainmentನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ನಿಗದಿಯಾಗಿದ್ದ ಹೆಲಿಪ್ಯಾಡ್...

ನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ನಿಗದಿಯಾಗಿದ್ದ ಹೆಲಿಪ್ಯಾಡ್ ನಲ್ಲಿ ಲ್ಯಾಂಡಿಂಗ್!

ರಾಯಚೂರು: ನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲವುಂತಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.

ನಟ ಕಿಚ್ಚ ಸುದೀಪ್ ಆಗಮಿಸಿದ ಹೆಲಿಕಾಪ್ಟರ್ ಡಿಸಿಎಂ ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ ಲ್ಯಾಂಡ್ ಆಗಬೇಕಿದ್ದ ಹೆಲಿಪ್ಯಾಡ್ ನಲ್ಲಿ ಲ್ಯಾಂಡಿಂಗ್ ಆಗಿದ್ದು, ಈ ವೇಳೆ ಗೊಂದಲದ ವಾತಾವರಣ ಸೃಷ್ಟಿಯಾಯಿತು. ಸಿಂಧನೂರಿನಲ್ಲಿ ಆಯೋಜಿಸಿದ್ದ 151 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ನಟ ಕಿಚ್ಚ ಸುದೀಪ್, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಈಶ್ವರ ಖಂಡ್ರೆ ಸೇರಿದಂತೆ ಹಲವು ಗಣ್ಯರು ಆಗಮಿಸಿದ್ದರು.

ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ನಟ ಸುದೀಪ್ ಸೇರಿ ಗಣ್ಯರಿಗೆ ಸಿಂಧನೂರಿನಲ್ಲಿ ಮೂರು ಪ್ರತ್ಯೇಕ ಹೆಲಿಪ್ಯಾಡ್ ಗಳನ್ನು ನಿರ್ಮಿಸಲಾಗಿತ್ತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ನಿರ್ಮಿಸಿದ್ದ ಹೆಲಿಪ್ಯಾಡ್ ನಲ್ಲಿ ಈ ಗೊಂದಲ ಸೃಷ್ಟಿಯಾಗಿದೆ. ಸಾಮೂಹಿಕ ವಿವಾಹ ಕಾರ್ಯಕ್ರಮ್ಮೆ ಕಿಚ್ಚ ಸುದೀಪ್ ಮೊದಲು ಆಗಮಿಸಿದ್ದಾರೆ. ಈ ವೇಳೆ ಸುದೀಪ್ ಅವರ ಹೆಲಿಕಾಪ್ಟರ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗಾಗಿ ನಿಗದಿಯಾಗಿದ್ದ ಸ್ಥಳದಲ್ಲಿ ಲ್ಯಾಂಡಿಂಗ್ ಆಗಿದೆ. ತಕ್ಷಣ ಪೊಲೀಸರು ಸೂಚನೆ ನೀಡಿದ್ದು, ಸೂಚನೆ ಮೇರೆಗೆ ಸುದೀಪ್ ಅವರ ಹೆಲಿಪಾಕ್ಟರ್ ನ್ನು ಮತ್ತೆ ಟೇಕ್ ಆಫ್ ಮಾಡಿ ಬಳಿಕ ರೀ ಲ್ಯಾಂಡಿಂಗ್ ಮಾಡಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಕಿ ಅವಘಡ:

ಇನ್ನು ಇದೇ ಸಂದರ್ಭದಲ್ಲಿ ಸಿಂಧನೂರು ಸಾಮೂಹಿಕ ವಿವಾಹ ಕಾರ್ಯಕ್ರಮದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರುವ ಘಟನೆ ಕೂಡ ನಡೆದಿದೆ.

ಸಿಂಧನೂರು ಪಟ್ಟಣದಲ್ಲಿ ಇಂದು 151 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಈಶ್ವರ ಖಂಡ್ರೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ನವ ಜೋಡಿಗಳನ್ನು ಹರಸಿ ಶುಭಕೋರಿದ ಬಳಿಕ ವೇದಿಕೆ ಮೇಲಿಂದ ಡಿಸಿಎಂ ಡಿ.ಕೆ.ಶಿವಕುಮಾರ್​ ತೆರಳಿದ ಬೆನ್ನಲ್ಲೇ ವೇದಿಕೆ ಮೆಟ್ಟಿಲುಗಳ ಬಳಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಅಲರ್ಟ್ ಆದ ಪೊಲೀಸ್ ಸಿಬ್ಬಂದಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಈಶ್ವರ ಖಂಡ್ರೆ ಅವರನ್ನು ಬೇರೆಡೆ ಕರೆದೊಯ್ದರು. ಕೂಡಲೇ ಬೆಂಕಿ ನಂದಿಸಿದ್ದಾರೆ. ತಾಂತ್ರಿಕ ದೋಷದಿಂದಾಗಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular