HomeLatest Newsಯುಗಾದಿ ಕರಿ: ಬಣ್ಣದಾಟದ ಬಳಿಕ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಯುಗಾದಿ ಕರಿ: ಬಣ್ಣದಾಟದ ಬಳಿಕ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ರಾಯಚೂರು: ಯುಗಾದಿ ಕರಿ ಹಿನ್ನೆಲೆಯಲ್ಲಿ ಬಣ್ಣದಾಟ ಆಡಿ ಬಳಿಕ ಈಜಲೆಂದು ನದಿಗೆ ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ದಾರುಣ ಘಟನೆ ರಾಯಚೂರಿನಲ್ಲಿ ನಡೆದಿದೆ.

ಎರಡು ಪ್ರತ್ಯೇಕ ಘಟನೆಯಲ್ಲಿ ಈ ದುರಂತ ಸಂಭವಿಸಿದೆ. ಅರಕೇರಾ ತಾಲೂಕಿನ ನಾಗೋಲಿ ಗ್ರಾಮದ ಬಳಿ ನಾರಾಯಣಪುರ ಬಲದಂಡೆ ಕಾಲುವೆಯಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು, ಸಾವನ್ನಪ್ಪಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬುದ್ದನ್ನಿ ಗ್ರಾಮದ ನಿವಾಸಿ ಗಂಗಾಧರ (20) ಮೃತ ಯುವಕ. ಹೋಳಿ ಹಬ್ಬದ ಬಳಿಕ ಸ್ನೇಹಿತರ ಜೊತೆ ಸ್ನಾನಕ್ಕೆ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ. ವಿಷಯ ತಿಳಿದ ಗ್ರಾಮಸ್ಥರು ಕಾಲುವೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಯುವಕನ ಮೃತದೇಹ ಹೊರತೆಗೆದಿದ್ದಾರೆ. ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಘಟನೆಯಲ್ಲಿ ಮಾನ್ವಿ ತಾಲೂಕಿನ ಗೋವಿನದೊಡ್ಡಿ ಗ್ರಾಮದಲ್ಲಿ ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲಾಗಿದ್ದಾನೆ. ಯುಗಾದಿ ಹಬ್ಬದ ಕರಿ ಹಿನ್ನೆಲೆಯಲ್ಲಿ ಬಣ್ಣದಾಟ ಆಡಿದ ಬಳಿಕ ಕೆರೆ ಸ್ನಾನಕ್ಕೆ ತೆರಳಿದ್ದಾಗ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

30 ವರ್ಷದ ಗೋವಿಂದರಾಜು ಕೆರೆಯಲ್ಲಿ ಮುಳುಗಿ ಮೃತಪಟ್ಟ ಯುವಕ. ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular