HomeLatest NewsBREAKING : ಬಳ್ಳಾರಿಯಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟದ ಅಡ್ಡೆ ಮೇಲೆ ದಾಳಿ : 523...

BREAKING : ಬಳ್ಳಾರಿಯಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟದ ಅಡ್ಡೆ ಮೇಲೆ ದಾಳಿ : 523 ಅಕ್ಕಿ ಚೀಲ ಜಪ್ತಿ, ಇಬ್ಬರು ಅರೆಸ್ಟ್.!

ಬಳ್ಳಾರಿ :   ಪಡಿತರ ಅಕ್ಕಿ ಅಕ್ರಮ ಸಾಗಾಟದ ಅಡ್ಡೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಬರೋಬ್ಬರಿ 523 ಅಕ್ಕಿ ಚೀಲವನ್ನು ವಶಪಡಿಸಿಕೊಂಡಿದ್ದಾರೆ.

ಬಳ್ಳಾರಿ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ದಾಳಿ ವೇಳೆ  523 ಅಕ್ಕಿ ಚೀಲ ಹಾಗೂ ಒಂದು ಲಾರಿ ಹಾಗೂ 2 ಪಿಕಪ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಬಳ್ಳಾರಿ  ಸಹಾಯಕ ಆಯಕ್ತ ರಾಜೇಶ್ ಹೆಚ್  ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಬಳ್ಳಾರಿಯ ಎಸ್ ಎಲ್ ಎನ್ ಮಾಲ್ ಸಮೀಪ ಈ ಘಟನೆ ನಡೆದಿದೆ.  ಈ ಸಂಬಂಧ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಪಡಿತರಚೀಟಿದಾರರಿಗೆ ವಿತರಿಸುವ ಅಕ್ಕಿಯನ್ನು ಸಂಗ್ರಹ ಮಾಡಿ ಬೇರೆ ಬೇರೆ ಕಡೆಗೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular