HomeKarnatakaಅನಧಿಕೃತ ರೈಲ್ವೆ ಟಿಕೆಟ್ ಬುಕಿಂಗ್ ಸೆಂಟರ್ ಗಳ ಮೇಲೆ ದಾಳಿ: ಮೂವರು ಅರೆಸ್ಟ್

ಅನಧಿಕೃತ ರೈಲ್ವೆ ಟಿಕೆಟ್ ಬುಕಿಂಗ್ ಸೆಂಟರ್ ಗಳ ಮೇಲೆ ದಾಳಿ: ಮೂವರು ಅರೆಸ್ಟ್

ಶಿವಮೊಗ್ಗ: ರೈಲ್ವೆ ಪ್ರಯಾಣಿಕರಿಗೆ ಆಗುತ್ತಿರುವ ಅನಾನುಕೂಲತೆಗಳು ಮತ್ತು ಶೋಷಣೆಯನ್ನು ಗಮನದಲ್ಲಿರಿಸಿಕೊಂಡು ಮೈಸೂರು ವಿಭಾಗದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ವತಿಯಿಂದ ತಾಳಗುಪ್ಪದಲ್ಲಿ ಅನಧಿಕೃತ ರೈಲ್ವೆ ಟಿಕೆಟ್ ಬುಕ್ ಮಾಡುವ ಟ್ರಾವೆಲ್ ಏಜೆಂಟ್ ರ ವಿರುದ್ಧ ದಾಳಿ ನಡೆಸಿ 3 ಆರೋಪಿಗಳನ್ನು ಬಂಧಿಸಲಾಗಿದೆ.

ದಾಳಿ ವೇಳೆ ತಾಳಗುಪ್ಪದ ಶ್ರೀ ರೇಣುಕಾ ಸೈಬರ್ ಸೆಂಟರ್ ನ ಗಣೇಶ್ ರಾಮ್ ನಾಯಕ್(31), ಶ್ರೀ ಸಂವಹನ ಮೊಬೈಲ್ ಮಾರಾಟ ಕೇಂದ್ರದ ರೇವಣ್ಣಪ್ಪ(36), ಆರ್ಯ ಸೈಬರ್ ನ ಪ್ರಶಾಂತ್ ಹೆಗಡೆ(46) ಅವರನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂಬರುವ ಹಬ್ಬಗಳ ಸಮಯದಲ್ಲಿ ಪ್ರಯಾಣಿಕರಿಗೆ ಆಗುವ ಅನಾನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಪ್ರಯಾಣಿಕರಿಗೆ ಆಗುವ ಶೋಷಣೆಯನ್ನು ತಡೆಯುವ ಉದ್ದೇಶದಿಂದ ಮೈಸೂರು ವಿಭಾಗದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ವತಿಯಿಂದ ಅನಧಿಕೃತ ರೈಲ್ವೆ ಟಿಕೆಟ್ ಬುಕ್ ಮಾಡುವ ಟ್ರಾವೆಲ್ ಏಜೆಂಟ್ ವಿರುದ್ಧ ಯೋಜನೆ ರೂಪಿಸಿದೆ.

3 ಸೈಬರ್ ಸೆಂಟರ್ ಗಳ ಮೇಲೆ ದಾಳಿ ನಡೆಸಿ ಅನಧಿಕೃತ ಟಿಕೆಟಿಂಗ್ ಬುಕ್ ಮಾಡುವ ಗ್ಯಾಂಗ್ ಗಳನ್ನು ಪತ್ತೆ ಹಚ್ಚಲಾಯಿತು. ಪ್ರಯಾಣಿಕರಿಗೆ ವಿಪರೀತ ಶುಲ್ಕ ವಿಧಿಸುವ ಮೂಲಕ ಇ-ಟಿಕೆಟ್‍ಗಳನ್ನು ಉತ್ಪಾದಿಸಲು ಬಳಸುತ್ತಿದ್ದ ಒಟ್ಟು 2.5 ಲಕ್ಷ ರೂ. ಮೌಲ್ಯದ ರೈಲ್ವೆ ಇ-ಟಿಕೆಟ್ ಗಳು ಮತ್ತು 1.25 ಲಕ್ಷಕ್ಕೂ ಹೆಚ್ಚು ಮೌಲ್ಯದ ಕಂಪ್ಯೂಟರ್, ಪ್ರಿಂಟರ್, ಮೊಬೈಲ್ ಫೋನ್‍ಗಳಂತಹ ಗ್ಯಾಜೆಟ್ ಗಳನ್ನು ವಶಪಡಿಸಿಕೊಳ್ಳಲಾಯಿತು. ಹಬ್ಬ ಹರಿದಿನದಂತಹ ಒತ್ತಡದ ಸಮಯದಲ್ಲಿ ಬೇರೆ ಬೇರೆ ಪೋನ್ ಸಂಖ್ಯೆಗಳಿಗೆ ಲಿಂಕ್ ಆದ ಬಹುವ್ಯಕ್ತಿ ಐಡಿಗಳನ್ನು ಸೃಜಿಸುವ ಮತ್ತು ಅನಧಿಕೃತವಾಗಿ ಇ-ಟಿಕೆಟ್ ಜನರೇಟ್ ಮಾಡಿ ಜನರಿಂದ ಹೆಚ್ಚಿನ ಕಮಿಷನ್‍ನನ್ನು ಚಾರ್ಜ್ ಮಾಡುವುದು ಈ ಗ್ಯಾಂಗ್ ಗಳ ಕೆಲಸವಾಗಿದೆ.

ಮೈಸೂರು ರೈಲ್ವೆ ವಿಭಾಗದ ವಿಭಾಗೀಯ ರೈಲ್ವೆ ಮ್ಯಾನೇಜರ್ ಶಿಲ್ಪಿ ಅಗರ್ವಾಲ್, ರೈಲ್ವೆ ಪ್ರಯಾಣಿಕರನ್ನು ಗುರಿಯಾಗಿಸುವ ಅನಧಿಕೃತ ಟ್ರಾವೆಲ್ ಏಜೆಂಟ್ ಗಳ ವಿರುದ್ಧ ಇಂತಹ ಬೃಹತ್ ದಾಳಿಗಳನ್ನು ಮುಂದುವರಿಸಲಾಗುವುದು. ಪ್ರಯಾಣಿಕರಿಗೆ ಆಗುವ ಅನಾನುಕೂಲದಿಂದ ರಕ್ಷಿಸಲು ಎಲ್ಲಾ ಪ್ರಯತ್ನಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇಂತಹ ಟ್ರಾವೆಲ್ ಏಜೆಂಟ್ ಗಳ ಬಗ್ಗೆ ಜಾಗರೂಕರಾಗಿರುವಂತೆ ಪ್ರಯಾಣಿಕರಿಗೆ ಎಚ್ಚರಿಸಿದ್ದಾರೆ.

ವಿಭಾಗೀಯ ಭದ್ರತಾ ಆಯುಕ್ತ ಜೆ.ಕೆ. ಶರ್ಮಾ ನಿರ್ದೇಶನದಂತೆ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಯಿತು. ತಂಡದಲ್ಲಿ ಅಪರಾಧ ನಿರೀಕ್ಷಕ ಎಂ. ನಿಶಾದ್, ಸಬ್ ಇನ್ಸ್ ಪೆಕ್ಟರ್ ಬಿ. ಚಂದ್ರಶೇಖರ್, ಸಹಾಯಕ ಸಬ್ ಇನ್ಸ್ ಪೆಕ್ಟರ್ ಗಳಾದ ವೆಂಕಟೇಶ್ ಮತ್ತು ಈಶ್ವರ್ ರಾವ್, ಹೆಡ್ ಕಾನ್ ಸ್ಟೆಬಲ್ ಡಿ. ಚೇತನ್ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular