HomeLatest NewsBREAKING : ಕರವೇ ಹೋರಾಟಕ್ಕೆ ಮಣಿದ ರೈಲ್ವೇ  ಇಲಾಖೆ ; ಇಂದು ನಿಗದಿಯಾಗಿದ್ದ ಮುಂಬಡ್ತಿ ಪರೀಕ್ಷೆ...

BREAKING : ಕರವೇ ಹೋರಾಟಕ್ಕೆ ಮಣಿದ ರೈಲ್ವೇ  ಇಲಾಖೆ ; ಇಂದು ನಿಗದಿಯಾಗಿದ್ದ ಮುಂಬಡ್ತಿ ಪರೀಕ್ಷೆ ಮುಂದೂಡಿಕೆ.!

ಹುಬ್ಬಳ್ಳಿ: ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಇಂದು ಹುಬ್ಬಳ್ಳಿಯ ರೈಲ್ವೆ ವಿಭಾಗೀಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಕರವೇ ಹೋರಾಟಗಾರರ ಹೋರಾಟಕ್ಕೆ ಮಣಿದ ರೈಲ್ವೇ ಇಲಾಖೆ ಪರೀಕ್ಷೆಯನ್ನು ಮುಂದೂಡಿದೆ.

ಗೂಡ್ಸ್ ರೈಲ್ವೆ ಮ್ಯಾನೇಜರ್ ಮತ್ತು ಎಲ್‌ಡಿಸಿ (LDC) ಹುದ್ದೆಗಳ ಮುಂಬಡ್ತಿ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ಬರೆಯಲು ಅವಕಾಶ ನೀಡಲಾಗಿದೆ. ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿರುವುದಕ್ಕೆ ಕನ್ನಡಿಗರು ಮತ್ತು ರೈಲ್ವೆ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಕರವೇ ಕಾರ್ಯಕರ್ತರು ರೈಲ್ವೆ ವಿಭಾಗೀಯ ಕಚೇರಿಯ ಮುಂದೆ ಜಮಾಯಿಸಿ, ಕೇಂದ್ರ ಸರ್ಕಾರ ಮತ್ತು ರೈಲ್ವೆ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿದರು.ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೂ ಆದ್ಯತೆ ನೀಡಬೇಕು ಮತ್ತು ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನೈಋುತ್ಯ ರೈಲ್ವೆಯು ಮಾರ್ಚ್ 17 ಮಂಗಳವಾರದಂದು ನಡೆಯುವ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಹೊರತುಪಡಿಸಿ ಹಿಂದಿ, ಇಂಗ್ಲಿಷ್ಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿರುವುದಕ್ಕೆ ಕನ್ನಡ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಮೈಸೂರು ವಿಭಾಗದಲ್ಲಿ ಗೂಡ್ಸ್ ಟ್ರೈನ್ ಮ್ಯಾನೇಜರ್ 194 ಹುದ್ದೆಗೆ ಹಾಗೂ ಹುಬ್ಬಳ್ಳಿ ವಿಭಾಗದಲ್ಲಿ ಎಲ್ಡಿಸಿಇ (ಲಿಮಿಟೆಡ್ ಡಿಪಾರ್ಟ್ ಮೆಂಟಲ್ ಕಾಂಪಿಟಿಟೀವ್ ಎಕ್ಸಾಮಿನೇಷನ್) 101 ಮುಂಬಡ್ತಿ ಹುದ್ದೆಗಳಿಗೆ 2025ರಲ್ಲಿ ಇಲಾಖೆ ಅಧಿಸೂಚನೆ ಹೊರಡಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಕರವೇ ಹೋರಾಟಗಾರರ ಹೋರಾಟಕ್ಕೆ ಮಣಿದ ರೈಲ್ವೇ ಇಲಾಖೆ ಪರೀಕ್ಷೆಯನ್ನು ಮುಂದೂಡಿದೆ. ಪರೀಕ್ಷೆಯ ದಿನಾಂಕವನ್ನು ಶೀಘ್ರವೇ ತಿಳಿಸುತ್ತೇವೆ ಎಂದು ರೈಲ್ವೇ ಇಲಾಖೆ ತಿಳಿಸಿದೆ. ಕನ್ನಡ ಭಾಷೆಯನ್ನು ಕಡೆಗಣಿಸಿ ಕೇವಲ ಹಿಂದಿ ಹೇರಿಕೆ ಮಾಡುತ್ತಿರುವ ರೈಲ್ವೆ ಇಲಾಖೆಯ ಧೋರಣೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular