ಯಾದಗಿರಿ: ಪ್ರಯಾಣಿಕರಿಗೆ ಟಿಕೆಟ್ ಕೊಡದದೇ ಮೊಬೈಲ್ ನಲ್ಲಿ ಮಾತನಾಡುತ್ತ ಹರಡೆ ಹೊಡ್ಶೆಯುತ್ತಿದ್ದ ರೈಲ್ವೆ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಗುಂತಕಲ್ ರೈಲ್ವೆ ವಿಭಾಗದ ಅಧಿಕಾರಿ ಸಿ.ಮೋಹನ್ ಸಸ್ಪೆಂಡ್ ಆದವರು. ಸಿ.ಮಹೇಶ್, ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಟಿಕೆಟ್ ಕೌಂಟರ್ ನಲ್ಲಿ ಕಾರ್ಯನಿರ್ವಹಿಸುತ್ತಿದರು. ಟಿಕೆಟ್ ಗಾಗಿ ನೂರಾರು ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಂತು ಕಾಯುತ್ತಿದ್ದರು. ಆದರೂ ಟಿಕೆಟ್ ನೀಡದೇ ಮೊಬೈಲ್ ನಲ್ಲಿ ಮಾತನಾಡುತ್ತಾ, ಕುರ್ಚಿಯಲ್ಲಿ ಆರಾಮವಾಗಿ ಕುಳಿತಿದ್ದರು. ಎಷ್ಟು ಹೊತ್ತಾದರೂ ಮೊಬೈಲ್ ಇಡದೇ ಮಾತನಾಡುತ್ತಾ ಕಾಲಹರಣ ಮಾಡುತ್ತಿರುವುದನ್ನು ಕಂಡ ಪ್ರಯಾಣಿಕರೊಬ್ಬರು ಅಧಿಕಾರಿಯ ಬೇಜವಾಬ್ದಾರಿತನವನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿ ಸ್ಟೇಷನ್ ಮಾಸ್ಟರ್ ಗೆ ಕಳುಹಿಸಿದ್ದರು.
ಇದನ್ನು ಗಮನಿಸಿದ ಗುಂತಕಲ್ ರೈಲ್ವೆ ವಿಭಾಗದ ಅಧಿಕಾರಿಗೆ ಸ್ಟೇಷನ್ ಮಾಸ್ಟರ್ ಕಳುಹಿಸಿದ್ದರು. ಸ್ಟೇಷನ್ ವ್ಯವಸ್ಥಾಪಕ ಭಾಗೀರಥ ಮೀನಾ ಅಧಿಕಾರಿ ಮಹೇಶ್ ಅವರನ್ನು ಸೇವೆಯಿಂದ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.