HomeLatest NewsBIG NEWS : ರೈಲ್ವೇ ಪ್ರಯಾಣಿಕರೇ ಗಮನಿಸಿ : ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ಸಂಚಾರ...

BIG NEWS : ರೈಲ್ವೇ ಪ್ರಯಾಣಿಕರೇ ಗಮನಿಸಿ : ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ಸಂಚಾರ ಅವಧಿ ಹೆಚ್ಚಳ

ಬೆಂಗಳೂರು :  ರೈಲ್ವೇ ಪ್ರಯಾಣಿಕರೇ ಗಮನಿಸಿ ….ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ಸಂಚಾರ ಅವಧಿ ಹೆಚ್ಚಳ ಮಾಡಲಾಗಿದೆ.  

ದಕ್ಷಿಣ ರೈಲೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳಿಂದಾಗಿ, ರೈಲು ಸಂಖ್ಯೆ 07355/07356 ಎಸ್‌ಎಸ್‌ಎಸ್ ಹುಬಳ್ಳಿ ರಾಮೇಶ್ವರಂ – ಎಸ್‌ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್‌ಪ್ರೆಸ್ ವಿಶೇಷ ರೈಲಿನ ಸಂಚಾರದ ಅವಧಿಯನ್ನು ವಿಸ್ತರಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಆದರೆ, ಈ ರೈಲು ರಾಮೇಶ್ವರಂ ಬದಲು ರಾಮನಾಥಪುರಂವರೆಗಷ್ಟೇ ಸಂಚರಿಸಲಿದೆ. ಈ ರೈಲು ಈಗಿರುವ ಸಂಯೋಜನೆ, ಸಮಯ ಮತ್ತು ನಿಲುಗಡೆಗಳೊಂದಿಗೆ ಚಲಿಸುವುದನ್ನು ಮುಂದುವರಿಸುತ್ತದೆ.

ಈ ಹಿಂದೆ ಆಗಸ್ಟ್ 30, 2025 ರವರೆಗೆ ಓಡಲು ಸೂಚಿಸಲಾಗಿದ್ದ ರೈಲು ಸಂಖ್ಯೆ 07355 ಎಸ್‌ಎಸ್‌ಎಸ್ ಹುಬ್ಬಳ್ಳಿ -ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಈಗ ಸೆಪ್ಟೆಂಬರ್ 27, 2025 ರವರೆಗೆ ನಾಲ್ಕು ಟ್ರಿಪ್‌ಗಳಿಗೆ ವಿಸ್ತರಿಸಲಾಗಿದೆ, ಆದರೆ, ಈ ರೈಲು ರಾಮೇಶ್ವರಂ ಬದಲು ರಾಮನಾಥಪುರಂನಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ. ಅದೇ ರೀತಿ, ಆಗಸ್ಟ್ 31, 2025 ರವರೆಗೆ ಸಂಚರಿಸಲು ಸೂಚಿಸಲಾಗಿದ್ದ, ರೈಲು ಸಂಖ್ಯೆ 07356 ರಾಮೇಶ್ವರಂ – ಎಸ್‌ಎಸ್‌ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಈಗ ಸೆಪ್ಟೆಂಬರ್ 7 ರಿಂದ ಸೆಪ್ಟೆಂಬರ್ 28, 2025 ರವರೆಗೆ ನಾಲ್ಕು ಟ್ರಿಪ್’ಗಳಿಗೆ ಚಲಿಸಲಿದೆ, ಇದು ರಾಮೇಶ್ವರದ ಬದಲಿಗೆ ರಾಮನಾಥಪುರಂನಿಂದ ತನ್ನ ಪ್ರಯಾಣವನ್ನು ಆರಂಭಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular