HomeIndiaಪ್ರಯಾಣಿಕರಿಗೆ ಗುಡ್ ನ್ಯೂಸ್: ‘ವಂದೇ ಭಾರತ್ ಸ್ಲೀಪರ್ ಕ್ಲಾಸ್’ ಸಂಚಾರ ಆರಂಭಿಸಲು ಸಜ್ಜಾದ ರೈಲ್ವೇ

ಪ್ರಯಾಣಿಕರಿಗೆ ಗುಡ್ ನ್ಯೂಸ್: ‘ವಂದೇ ಭಾರತ್ ಸ್ಲೀಪರ್ ಕ್ಲಾಸ್’ ಸಂಚಾರ ಆರಂಭಿಸಲು ಸಜ್ಜಾದ ರೈಲ್ವೇ

ನವದೆಹಲಿ: ವಂದೇ ಭಾರತ್ ಸ್ಲೀಪರ್ ಕ್ಲಾಸ್ ರೈಲಿನ ಪ್ರಾಯೋಗಿಕ ಓಡಾಟ ಇನ್ನೆರಡು ತಿಂಗಳಲ್ಲಿ ಆರಂಭವಾಗಲಿದೆ.

ಪ್ರಸ್ತುತ, ರೈಲ್ವೇ ವಂದೇ ಭಾರತ್ ಎಕ್ಸ್‌ ಪ್ರೆಸ್ ಅನ್ನು ಓಡಿಸುತ್ತಿದೆ. ಇದು ಕೇವಲ ಚೇರ್ ಕಾರ್‌ ಗಳನ್ನು ಹೊಂದಿದೆ. ವಂದೇ ಭಾರತ್ ಸ್ಲೀಪರ್ ರೈಲು ಓಡಿಸಲು ಜನರಿಂದ ಬೇಡಿಕೆ ಇದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ನವದೆಹಲಿಯಲ್ಲಿ ಹೇಳಿದ್ದಾರೆ.

ವಂದೇ ಭಾರತ್ ರೈಲು ಮೊದಲ ಸ್ವದೇಶಿ ಅರೆ ವೇಗದ ರೈಲು. ಮುಂದಿನ ಐದು ವರ್ಷಗಳಲ್ಲಿ ಸರ್ಕಾರವು ರೈಲು ಮೂಲಸೌಕರ್ಯ ಅಭಿವೃದ್ಧಿ ಮತ್ತು ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ಒದಗಿಸುವತ್ತ ಹೆಚ್ಚಿನ ಗಮನ ಹರಿಸಲಿದೆ ಎಂದು ಸಚಿವರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಹತ್ತು ವರ್ಷಗಳಲ್ಲಿ 35 ಸಾವಿರ ಕಿಲೋಮೀಟರ್ ರೈಲು ಹಳಿಗಳನ್ನು ನಿರ್ಮಿಸಲಾಗಿದೆ. ಕಡಿಮೆ ಆದಾಯದ ಗುಂಪುಗಳಿಗೆ ಆರಾಮದಾಯಕ ಪ್ರಯಾಣವನ್ನು ಒದಗಿಸುವತ್ತ ಸರ್ಕಾರ ಗಮನಹರಿಸುತ್ತಿದೆ. ಅಮೃತ್ ಭಾರತ್ ರೈಲುಗಳ ಉತ್ಪಾದನೆಯನ್ನು ಹೆಚ್ಚಿಸುವ ಕೆಲಸ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular