HomeKarnatakaಇಂದಿನಿಂದ 5 ದಿನ ಹಲವು ಜಿಲ್ಲೆಗಳಲ್ಲಿ ಮಳೆ: ಇಲ್ಲಿದೆ ಮಾಹಿತಿ

ಇಂದಿನಿಂದ 5 ದಿನ ಹಲವು ಜಿಲ್ಲೆಗಳಲ್ಲಿ ಮಳೆ: ಇಲ್ಲಿದೆ ಮಾಹಿತಿ

ಬೆಂಗಳೂರು: ಮಾರ್ಚ್ 26 ರಿಂದ 31 ರವರೆಗೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್ 26 ಮತ್ತು 27ರಂದು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಕೋಲಾರ, ಮೈಸೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾರ್ಚ್ 28ರಂದು ಯಾವುದೇ ಮಳೆ ಮುನ್ಸೂಚನೆ ನೀಡಲಾಗಿಲ್ಲ.

ಮಾರ್ಚ್ 30ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮಾರ್ಚ್ 31ರಂದು ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ. ಉತ್ತರ ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿ ಪ್ರದೇಶದಲ್ಲಿ ಮಳೆ ಮುನ್ಸೂಚನೆ ಇಲ್ಲ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular