HomeKarnatakaಮಹಾ ಮಳೆಯಿಂದ ತತ್ತರಿಸಿದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ ತಗ್ಗಲಿದೆ ಮಳೆಯ ತೀವ್ರತೆ

ಮಹಾ ಮಳೆಯಿಂದ ತತ್ತರಿಸಿದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ ತಗ್ಗಲಿದೆ ಮಳೆಯ ತೀವ್ರತೆ

ಬೆಂಗಳೂರು: ಗುರುವಾರದಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಮಾಹಿತಿ ನೀಡಿದೆ.

ಗುರುವಾರ ರಾಜ್ಯದ ಯಾವುದೇ ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿಲ್ಲ. ಕರಾವಳಿಯ ಒಂದೆರಡು ಪ್ರದೇಶಗಳಲ್ಲಿ, ದಕ್ಷಿಣ ಒಳನಾಡಿನ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಹಾವೇರಿ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಮಳೆಯಾಗಲಿದ್ದು, ಒಣಹವೆ ಮುಂದುವರೆಯುವ ಸಂಭವ ಇದೆ ಎಂದು ಹೇಳಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸಾಧಾರಣ ಮಳೆಯಾಗುವ ಸಂಭವವಿದೆ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆ ಇದೆ. ಶುಕ್ರವಾರದಿಂದ ದಕ್ಷಿಣ ಒಳನಾಡಿನ ಕೆಲವು ಕಡೆ ಸಾಧಾರಣ ಮಳೆಯಾಗುವ ಸಂಭವ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಒಣಹವೆ ಇರಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular