HomeKarnatakaರಾಜ್ಯದಲ್ಲಿ ಡಿ 17ರಿಂದ ಮತ್ತೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಡಿ 17ರಿಂದ ಮತ್ತೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಶನಿವಾರದಿಂದ ಬಿಸಿಲಿನ ವಾತಾವರಣ ಇರಲಿದ್ದು, ಡಿಸೆಂಬರ್ 17 ರಿಂದ ಮತ್ತೆ ಮಳೆ ಆರಂಭವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾಯುಭಾರ ಕುಸಿತದ ಪರಿಣಾಮ ಕಳೆದ ಎರಡು ದಿನಗಳಿಂದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ವಾಯುಭಾರ ಕುಸಿತದ ತೀವ್ರತೆ ಕಡಿಮೆಯಾಗಿರುವುದರಿಂದ ಶನಿವಾರದಿಂದ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯಾದ್ಯಂತ ಬಿಸಿಲಿನ ವಾತಾವರಣ ಇರಲಿದೆ. ಡಿಸೆಂಬರ್ 17ರಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular