HomeKarnatakaರಾಜ್ಯದಲ್ಲಿ ಐದು ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ರಾಜ್ಯದಲ್ಲಿ ಐದು ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರದಿಂದ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಮುದ್ರಮಟ್ಟದಿಂದ 900 ಕಿಲೋಮೀಟರ್ ಎತ್ತರದಲ್ಲಿ ಛತ್ತೀಸ್ಗಡದಿಂದ ತಮಿಳುನಾಡು ಮಧ್ಯಭಾಗದವರೆಗೆ ಟ್ರಫ್ ಇರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಮಳೆ ಆಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹಬೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular