HomeKarnatakaಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಕೆಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್

ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಕೆಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಕೆಲವು ಕಡೆ ಮಳೆ ಮುಂದುವರೆದಿದ್ದು, ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಕೆಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ನೀಡಲಾಗಿದೆ.

ಮೇ 1 ರಂದು ಕಲ್ಬುರ್ಗಿ, ಕೊಪ್ಪಳ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಹಾಸನ, ರಾಮನಗರ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. 64.5 ಮಿ.ಮೀ.ನಿಂದ 115.5 ಮಿಲಿಮೀಟರ್ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇ 2 ರಂದು ಕೊಡಗು, ಮಂಡ್ಯ, ಬೀದರ್, ಕೊಪ್ಪಳ, ರಾಯಚೂರಿನಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ, 115.6 ಮಿಲಿಮೀಟರ್ ನಿಂದ 204.5 ಮಿಲಿ ಮೀಟರ್ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular