HomeKarnatakaರಾಜ್ಯದಲ್ಲಿ 5 ದಿನ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ 5 ದಿನ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಾರ್ಚ್ 30 ರಿಂದ ಏಪ್ರಿಲ್ 4ರವರೆಗೆ ಮಳೆಯಾಗಲಿದೆ. ಮೋಡ ಕವಿದ ವಾತಾವರಣದೊಂದಿಗೆ ಗಾಳಿಯ ಪ್ರಮಾಣ ಇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಬುಧವಾರ ರಾಜ್ಯದ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಕಲಬುರ್ಗಿಯಲ್ಲಿ ಅತಿ ಹೆಚ್ಚು 39.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular