HomeKarnatakaಇಂದಿನಿಂದ 4 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಇಂದಿನಿಂದ 4 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳವಾರದಿಂದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬಾಗಲಕೋಟೆ, ಕಲಬುರ್ಗಿ, ಬೀದರ್, ಬೆಳಗಾವಿ, ರಾಯಚೂರು, ಕೊಪ್ಪಳ, ಯಾದಗಿರಿ, ಜಿಲ್ಲೆಗಳಲ್ಲಿ ಏಪ್ರಿಲ್ 29 ರವರೆಗೆ ಗುಡುಗು ಮಿಂಚು ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಪ್ರದೇಶದಲ್ಲಿ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್ 28ರಿಂದ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular