HomeKarnatakaಬಿಸಿಲಿನ ಬೇಗೆ ನಡುವೆ ಮುಂದಿನ 5 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ...

ಬಿಸಿಲಿನ ಬೇಗೆ ನಡುವೆ ಮುಂದಿನ 5 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ಬಿಸಿಲ ಬೇಗೆಯ ನಡುವೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳ ನಾಡಿನಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡು, ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಏಪ್ರಿಲ್ 1 ಮತ್ತು 2 ರಂದು ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ 3ರಿಂದ 5ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಚದುರಿದಂತೆ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಯ ಕೆಲವೆಡೆ ಹಗುರದಿಂದ ಕೂಡಿದ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏ. 2ರಿಂದ 4ರವರೆಗೆ ಬೆಂಗಳೂರಿನಲ್ಲಿ ಮೂರು ದಿನ ಮೋಡ ಮುಸುಕಿದ ವಾತಾವರಣ ಇರಲಿದ್ದು, ಹಗುರ ಮಳೆ ಆಗುವ ಸಾಧ್ಯತೆ ಇದೆ. ಇದರಿಂದ ತಾಪಮಾನದಲ್ಲಿ ಅಲ್ಪ ಇಳಿಕೆಯಾಗಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular