HomeKarnatakaಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಯಾದಗಿರಿ ಜಿಲ್ಲೆಗಳ ಹಲವು ಕಡೆ ಸೆ. 26ರಂದು ಭಾರಿ ಮಳೆಯಾಗುವ ಸಂಭವ ಇದೆ.

ಸೆಪ್ಟೆಂಬರ್ 29, 30 ರಂದು ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಂಭವವಿದೆ. ಬಿರುಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ವರೆಗೆ ಇರುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೆ. 27ರ ಬೆಳಗ್ಗೆವರೆಗೆ ಕರಾವಳಿಯ ಬಹುತೇಕ ಮತ್ತು ಒಳನಾಡಿನ ಕೆಲವೆಡೆ ಹಗುರದಿಂದ ಕೂಡಿದ ಮಳೆಯಾಗುವ ಸಂಭವ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular