HomeKarnatakaಗಮನಿಸಿ…! ರಾಜ್ಯದಲ್ಲಿಂದು ಭಾರಿ ಮಳೆ ಸಾಧ್ಯತೆ

ಗಮನಿಸಿ…! ರಾಜ್ಯದಲ್ಲಿಂದು ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಕಲಬುರ್ಗಿ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಚಾಮರಾಜನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಮಳೆ ಆಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ 8ರಂದು ಕರಾವಳಿಯ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉತ್ತರ ಒಳನಾಡಿನ ಬೆಳಗಾವಿ, ಗದಗ, ಬೀದರ್ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಏಪ್ರಿಲ್ 9 ಮತ್ತು 10ರಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular