HomeKarnatakaಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆ ಆತಂಕ ಶುರುವಾಗಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಕ್ಷಿಣ ಒಳಗಿನ ದಾವಣಗೆರೆ ಜಿಲ್ಲೆಗಳ ವ್ಯಾಪ್ತಿಯಲ್ಲಿ ಆಗಸ್ಟ್ 16 ರಿಂದ ಎರಡು ದಿನ ಬಾರಿ ಮಳೆಯಾಗುವ ಸಂಭವ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಬೆಳಗಾವಿ, ಬಾಗಲಕೋಟೆ, ಧಾರವಾಡ, ರಾಯಚೂರು, ಯಾದಗಿರಿ ಹಾಸನದಲ್ಲಿ ಮುಂದಿನ 24 ಗಂಟೆಗಳ ಕಾಲ ಹೆಚ್ಚಿನ ಮಳೆಯಾಗಲಿದೆ. ಕೊಪ್ಪಳ, ಚಿತ್ರದುರ್ಗ, ಗದಗ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೋಲಾರ, ಮಂಡ್ಯ, ರಾಮನಗರ, ವಿಜಯನಗರ, ಚಿಕ್ಕಬಳ್ಳಾಪುರ ಸೇರಿ ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗಸ್ಟ್ 16ರಂದು ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಆಗಸ್ಟ್ 17ರಂದು ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳು, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular