HomeLatest NewsRAIN ALERT: ರಾಜ್ಯದಲ್ಲಿ ಹಿಂಗಾರು ಮಳೆ ಅಬ್ಬರ ಮುಂದುವರಿಕೆ, 'ಆರೆಂಜ್ ಅಲರ್ಟ್' ಘೋಷಣೆ

RAIN ALERT: ರಾಜ್ಯದಲ್ಲಿ ಹಿಂಗಾರು ಮಳೆ ಅಬ್ಬರ ಮುಂದುವರಿಕೆ, ‘ಆರೆಂಜ್ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಹಿಂಗಾರು ಮಳೆ ಆರ್ಭಟಿಸುತ್ತಿದ್ದು, ಮುಂದಿನ ಒಂದು ವಾರ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. 24 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ಹೆಚ್ಚಿನ ಮಳೆ ಆಗಲಿದೆ ಎಂದು ಹೇಳಲಾಗಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಕೋಲಾರ, ರಾಮನಗರ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಮಳೆಯಾಗುವ ಸಂಭವ ಇದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular