HomeLatest NewsRain alert Karnataka : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಮುಂದಿನ 5 ದಿನ ರಾಜ್ಯಾದ್ಯಂತ...

Rain alert Karnataka : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಮುಂದಿನ 5 ದಿನ ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ.!

ಬೆಂಗಳೂರು : ವಾಯುಭಾರ ಕುಸಿತದ ಹಿನ್ನೆಲೆ ಮುಂದಿನ 5 ದಿನ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯಾದ್ಯಂತ ಇಂದಿನಿಂದ 4-5 ದಿನ ಭಾರಿ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೌದು. ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮತ್ತಷ್ಟು ಚುರುಕಾಗಲಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಧಾರಾವಾಡ ಹಾಗೂ ಹಾವೇರಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗೂ ಗದಗ, ಬೆಳಗಾವಿ, ಕೊಪ್ಪಳ, ರಾಯಚೂರು, ಬಳ್ಳಾರಿ, ದಾವಣಗೆರೆ, ವಿಜಯ ನಗರಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಮಂಡ್ಯ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ..

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಡುಪಿ, ಗದಗ, ರಾಯಚೂರು, ಕಲಬುರಗಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು. ಶಿವಮೊಗ್ಗ, ತುಮಕೂರಿನಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ .

ಈಗಾಗಲೇ ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಿದ್ದು, ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಅತಿ ಹೆಚ್ಚು ಮಳೆಯಾಗಲಿದ್ದು, ನದಿತೀರ, ಬೆಟ್ಟಗುಡ್ಡಗಳ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಜೂನ್ 13ರಿಂದ ಮಳೆಯ ಅಬ್ಬರ ಜೋರಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular