ಬೆಂಗಳೂರು : ಬೆಂಗಳೂರು ಸೇರಿ ರಾಜ್ಯಾದ್ಯಂತ 1 ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ದಿನ ಭಾರಿ ಮಳೆಯಾಗಲಿದ್ದು, ಗುರುವಾರ ರೆಡ್ ಅಲರ್ಟ್ ಹಾಗೂ ಮುಂದಿನ 5 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.ಧಾರವಾಡ, ಉಡುಪಿ, ಶಿವಮೊಗ್ಗ, ಬೆಳಗಾವಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತ್ಯಧಿಕ ಭಾರೀ ಮಳೆಯಾಗಲಿದ್ದು, ಗುಡುಗು ಮಿಂಚು ಸಮೇತ ಮಳೆ ಸುರಿಯಲಿದೆ. ಈ ಸಂಬಂಧ ‘ಆರೆಂಜ್ ಅಲರ್ಟ್’ ಘೋಷಿಸಿಲಾಗಿದೆ.
ಇಂದಿನಿಂದ ಮೇ 28ರ ವರೆಗೆ ಶಿವಮೊಗ್ಗ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಮುಂದಿನ ಐದು ದಿನ ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರವಾಗಿ ಗುಡುಗು ಸಹಿತ ಭಾರೀ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
TAGGED:ಭಾರಿ ಮಳೆ