ಬೆಂಗಳೂರು : ರಾಜ್ಯದಲ್ಲಿ ಮುಂದಿನ 6 ದಿನ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ಲಭ್ಯವಾಗಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ 1 ವಾರ ಬೆಂಗಳೂರು ಸೇರಿದಂತೆ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಇಂದು ದಕ್ಷಿಣ ಒಳನಾಡಿನ ಚಿಕ್ಕಮಗಳೂರು. ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಮೇ 2 ರಿಂದ 8 ರವರೆಗೆ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ಧಾರವಾಡ, ಗದಗ, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ.