HomeLatest NewsRain alert Karnataka : ರಾಜ್ಯದಲ್ಲಿ ಮುಂದಿನ 6 ದಿನ ಭಾರಿ 'ಮಳೆ' ಮುನ್ಸೂಚನೆ :...

Rain alert Karnataka : ರಾಜ್ಯದಲ್ಲಿ ಮುಂದಿನ 6 ದಿನ ಭಾರಿ ‘ಮಳೆ’ ಮುನ್ಸೂಚನೆ : ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ.!

ಬೆಂಗಳೂರು : ರಾಜ್ಯದಲ್ಲಿ ಮುಂದಿನ 6 ದಿನ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ಲಭ್ಯವಾಗಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮುಂದಿನ 1 ವಾರ ಬೆಂಗಳೂರು ಸೇರಿದಂತೆ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಇಂದು ದಕ್ಷಿಣ ಒಳನಾಡಿನ ಚಿಕ್ಕಮಗಳೂರು. ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಮೇ 2 ರಿಂದ 8 ರವರೆಗೆ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ಧಾರವಾಡ, ಗದಗ, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular