ಬೆಂಗಳೂರು : ರಾಜ್ಯದಲ್ಲಿ 1 ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಈ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹೌದು. 1 ಜಿಲ್ಲೆಗೆ ರೆಡ್ ಅಲರ್ಟ್ ಹಾಗೂ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
TAGGED:ಭಾರಿ ಮಳೆ
