ಬೆಂಗಳೂರು : ಜೂನ್ 19 ರವರೆಗೆ ಈ ಭಾಗಗಳಲ್ಲಿ ಗುಡುಗು, ಬಿರುಗಾಳಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಜಯನಗರ, ತುಮಕೂರು, ಶಿವಮೊಗ್ಗ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು,ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಪ್ಪ, ಎನ್ ಆರ್ ಪುರದಲ್ಲಿ ಭಾರಿ ಮಳೆಯಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಮಂಗಳೂರಿನ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಪ್ರಮುಖ ರಸ್ತೆಗಳು ಜಲಾವೃತಗೊಂಡಿದೆ. ಜೂನ್ 19 ರವರೆಗೆ ರಾಜ್ಯದ ಹಲವು ಕಡೆ ಗುಡುಗು, ಬಿರುಗಾಳಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
TAGGED:ಭಾರಿ ಮಳೆ