HomeLatest NewsRain alert Karnataka : ರಾಜ್ಯಾದ್ಯಂತ ಇಂದಿನಿಂದ 4-5  ದಿನ ಭಾರಿ ಮಳೆ, ಈ ಜಿಲ್ಲೆಗಳಿಗೆ...

Rain alert Karnataka : ರಾಜ್ಯಾದ್ಯಂತ ಇಂದಿನಿಂದ 4-5  ದಿನ ಭಾರಿ ಮಳೆ, ಈ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್ ಘೋಷಣೆ.!

ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ 4-5 ದಿನ ಭಾರಿ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೌದು. ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮತ್ತಷ್ಟು ಚುರುಕಾಗಲಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಉಡುಪಿ, ಗದಗ, ರಾಯಚೂರು, ಕಲಬುರಗಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು. ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ .

ನಾಳೆ ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಧಾರಾವಾಡ ಹಾಗೂ ಹಾವೇರಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗೂ ಗದಗ, ಬೆಳಗಾವಿ, ಕೊಪ್ಪಳ, ರಾಯಚೂರು, ಬಳ್ಳಾರಿ, ದಾವಣಗೆರೆ, ವಿಜಯ ನಗರಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಮಂಡ್ಯ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ..

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular