ಬೆಂಗಳೂರು : ಜೂನ್ 23 ರವರೆಗೆ ರಾಜ್ಯದ ಹಲವು ಕಡೆ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು. ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಹಾಸನ, ಕೊಡಗು, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಧಾರವಾಡ. ಹಾವೇರಿ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಪ್ಪ, ಎನ್ ಆರ್ ಪುರದಲ್ಲಿ ಭಾರಿ ಮಳೆಯಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಮಂಗಳೂರಿನ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಪ್ರಮುಖ ರಸ್ತೆಗಳು ಜಲಾವೃತಗೊಂಡಿದೆ.