ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ 22 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಗೂ ಮೇ 22ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ..ತೆಲಂಗಾಣದಿಂದ ಉತ್ತರ ತಮಿಳುನಾಡಿನವರೆಗೆ ವಿಸ್ತರಿಸಿರುವ ವಾಯುಭಾರ ಕುಸಿತದಿಂದಾಗಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.
ಕರ್ನಾಟಕದ ಬೆಂಗಳೂರು ನಗರ, ಬೆಂಗಳುರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಹಾಸನ, ಕೊಡಗು, ಚಿಕ್ಕಮಗಳುರು, ಬೆಳಗಾವಿ, ಬೀದರ್, ಯಾದಗಿರಿ, ರಾಯಚೂರು, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಗಾಳಿಯು ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Daily Weather Briefing English (18.05.2025)
— India Meteorological Department (@Indiametdept) May 18, 2025
YouTube : https://t.co/trpvwsNbjL#imd #india #rain #weatherupdate #weatherforecast #Rainfall #mausam #thunderstorm #hailstorm #heatwave@moesgoi @ndmaindia @DDNational @airnewsalerts pic.twitter.com/fPDnpti8mN