ಬೆಂಗಳೂರು : ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 13 ಜಿಲ್ಲೆಗಳಲ್ಲಿ 2 ದಿನ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ. ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಸೆಪ್ಟೆಂಬರ್ 29ರವರೆಗೂ ಕರ್ನಾಟಕದಲ್ಲಿ ಮಳೆಯಾಗಲಿದೆ. ಬಂಗಾಳ ಉಪಸಾಗರದ ಉತ್ತರ ಒಡಿಶಾ, ಆಂಧ್ರದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತಗೊಂಡಿದೆ. ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ. . ಬೆಂಗಳೂರು, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.