ಬೆಂಗಳೂರು : ವಾಯುಭಾರ ಕುಸಿತದ ಹಿನ್ನೆಲೆ ಮುಂದಿನ 1 ವಾರ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ಇಂದಿನಿಂದ 1 ವಾರ ಭಾರಿ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಧಾರಾವಾಡ ಹಾಗೂ ಹಾವೇರಿಯಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಈಗಾಗಲೇ ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಿದ್ದು, ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಅತಿ ಹೆಚ್ಚು ಮಳೆಯಾಗಲಿದ್ದು, ನದಿತೀರ, ಬೆಟ್ಟಗುಡ್ಡಗಳ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದಲ್ಲಿ ಜೂನ್ 13ರಿಂದ ಮಳೆಯ ಅಬ್ಬರ ಜೋರಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.