ಬೆಂಗಳೂರು : ಮುಂದಿನ 1 ವಾರ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ. ಹಾಗೂ ಚಿಕ್ಕಮಗಳೂರು, ಕೊಡಗು, ಹಾಸನ, ಜಿಲ್ಲೆಯಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಹಾಸನ, ಕೊಡಗು, ದಾವಣಗೆರೆ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹಲವು ಕಡೆ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆ ನಿರೀಕ್ಷೆಯಿದೆ. ಮುಂದುವರೆದು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು. ದಾವಣಗೆರೆ,. ಚಿತ್ರದುರ್ಗ, ಬೆಳಗಾವಿ, ದಾರವಾಡ, ವಿಜಯಪುರ. ಕಲಬುರಗಿ ಸೇರಿ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
7:55PM UPDATE: LLJ gusting at 33 to 40 knots as per Goa Doppler Radar this evening. This is Peak surge.
— Namma Karnataka Weather (@namma_vjy) July 25, 2025
No wonder we are seeing strong gale across Udupi and Kundapura this evening.
Folks staying in the area from Mangalore to Karwar, be very careful while stepping out. Falling… pic.twitter.com/buQbBapKUo
Strong wind and rain near Kalasa, Chikmagalur.
— Namma Karnataka Weather (@namma_vjy) July 25, 2025
VC Vinayaka#KarnatakaRains pic.twitter.com/H7TMkBbJ1p