HomeKarnatakaRain Alert : ರಾಜ್ಯದಲ್ಲಿ ಭಾರಿ 'ಮಳೆ' ಮುನ್ನೆಚ್ಚರಿಕೆ : 4 ಜಿಲ್ಲೆಗಳಿಗೆ ರೆಡ್ ಅಲರ್ಟ್...

Rain Alert : ರಾಜ್ಯದಲ್ಲಿ ಭಾರಿ ‘ಮಳೆ’ ಮುನ್ನೆಚ್ಚರಿಕೆ : 4 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಕಡೆ ಮುಂಗಾರು ಚುರುಕಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದ 4 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಜುಲೈ 6 ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಮಂಡ್ಯ, ತುಮಕೂರು. ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಭಾಗದಲ್ಲಿ ಕೂಡ ಭಾರಿ ಮಳೆಯಾಗಲಿದ್ದು, ಜುಲೈ 3ರವರೆಗೆ ಯೆಲ್ಲೋ ಅಲರ್ಟ್ ಹಾಗೂ ಜುಲೈ 4 ಮತ್ತು 5ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಜುಲೈ ಮೊದಲನೆಯ ವಾರದಿಂದ ಮಳೆ ಅಬ್ಬರ ಶುರುವಾಗಲಿದೆ. ಆಗಸ್ಟ್ವರೆಗೂ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular