HomeKarnatakaRain alert Karnataka : ಆ.19 ರವರೆಗೆ ರಾಜ್ಯದಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ...

Rain alert Karnataka : ಆ.19 ರವರೆಗೆ ರಾಜ್ಯದಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಮುಂದಿನ ದಿನಗಳಲ್ಲಿ ಮಳೆ ಬಿರುಸಾಗಲಿದೆ. ಆಗಸ್ಟ್ 19 ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 19ರವರೆಗೆ ಭಾರಿ ಮಳೆಯಾಗಲಿದೆ,.ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಬೆಳಗಾವಿ, ಬೀದರ್, , ಹಾವೇರಿ, ಧಾರವಾಡ, ಗದಗ ಕಲಬುರಗಿ, ಕೊಪ್ಪಳ, ರಾಯಚೂರು, ಚಾಮರಾಜನಗರ, ಚಿಕ್ಕಬಳ್ಳಾಪುರ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ ಮುಂದಿನ ಐದು ದಿನಗಳವರೆಗೆ ಮತ್ತು ಹಿಮಾಚಲ ಪ್ರದೇಶ, ಬಿಹಾರ, ಉಪ ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಿಂದ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular