HomeKarnatakaRain alert Karnataka : ನಾಳೆಯಿಂದ ಮತ್ತೆ ರಾಜ್ಯದಲ್ಲಿ 'ಮುಂಗಾರು' ಚುರುಕು : ಈ ಜಿಲ್ಲೆಗಳಲ್ಲಿ...

Rain alert Karnataka : ನಾಳೆಯಿಂದ ಮತ್ತೆ ರಾಜ್ಯದಲ್ಲಿ ‘ಮುಂಗಾರು’ ಚುರುಕು : ಈ ಜಿಲ್ಲೆಗಳಲ್ಲಿ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ಆಗಸ್ಟ್ ತಿಂಗಳಿನಲ್ಲಿ ರಾಜ್ಯದ ಹಲವು ಕಡೆ ಮಳೆರಾಯನ ಅಬ್ಬರ ಕಡಿಮೆಯಾಗಿದ್ದು, ಮತ್ತೆ ರೈತರಿಗೆ ಆತಂಕ ಶುರುವಾಗಿದೆ. ಬಿಸಿಲಿನ ತಾಪಮಾನಕ್ಕೆ ಜಲಮೂಲಗಳೆಲ್ಲ ಬರಿದಾಗುತ್ತಲೇ ಇವೆ. ಕೃಷಿ ಚಟುವಟಿಕೆಗಳಿಗೆ ನೀರಿಲ್ಲದೇ ರೈತರು ಆಕಾಶದತ್ತ ನೋಡುತ್ತಾ ಕುಳಿತಿದ್ದಾರೆ.

ಇದರ ನಡುವೆ ಹವಾಮಾನ ಇಲಾಖೆ ರೈತರಿಗೆ ಗುಡ್ ನ್ಯೂಸ್ ನೀಡಿದ್ದು, ಆಗಸ್ಟ್ 20ರ ಬಳಿನ ಮುಂಗಾರು ಮತ್ತೇ ಚುರುಕಾಗಲಿದೆ, ಹಲವು ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, , ಕೊಪ್ಪಳ, ರಾಯಚೂರು, ವಿಜಯಪುರ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಜಿಲ್ಲೆಗಳಲ್ಲಿ ಆಗಸ್ಟ್ 20ರ ನಂತರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಹಾಸನ,ಕೊಡಗು, ಕೋಲಾರ, ಮಂಡ್ಯ, , ತುಮಕೂರು, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular