HomeKarnatakaRain alert Karnataka : ರಾಜ್ಯದಲ್ಲಿ ಅಬ್ಬರಿಸಲಿದೆ ಮತ್ತೊಂದು 'ಚಂಡಮಾರುತ' ; ಬೆಂಗಳೂರು ಸೇರಿ 10...

Rain alert Karnataka : ರಾಜ್ಯದಲ್ಲಿ ಅಬ್ಬರಿಸಲಿದೆ ಮತ್ತೊಂದು ‘ಚಂಡಮಾರುತ’ ; ಬೆಂಗಳೂರು ಸೇರಿ 10 ಜಿಲ್ಲೆಗಳಲ್ಲಿ ಭಾರಿ ‘ಮಳೆ’ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಅಪ್ಪಳಿಸಲಿದ್ದು, ಬೆಂಗಳೂರು ಸೇರಿ ರಾಜ್ಯಾದ್ಯಂತ ಮಳೆ ಮುನ್ಸೂಚನೆ ನೀಡಲಾಗಿದೆ.

ಭಾರಿ ಮಳೆ ಹಿನ್ನೆಲೆ ರಾಜ್ಯದ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಫೋಷಿಸಲಾಗಿದ್ದು, ರಾಜ್ಯದಲ್ಲಿ ಇಂದಿನಿಂದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದಿನಿಂದಲೇ ತುಂತುರು ಮಳೆಯಾಗುತ್ತಿದ್ದು, ಹಲವೆಡೆ ಮೋಡ ಕವಿದ ವಾತಾವರಣವಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಡ್ಯ,. ಮೈಸೂರು. ರಾಮನಗರ. ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ಸುತ್ತಾ ಮುತ್ತಾ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಮುಂಜಾಗೃತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular