HomeKarnatakaRain Alert Karnataka : 'ಫೆಂಗಲ್' ಚಂಡಮಾರುತದ ಎಫೆಕ್ಟ್ : ಬೆಂಗಳೂರು ಸೇರಿ ರಾಜ್ಯದ ಹಲವೆಡೆ...

Rain Alert Karnataka : ‘ಫೆಂಗಲ್’ ಚಂಡಮಾರುತದ ಎಫೆಕ್ಟ್ : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ‘ಭಾರಿ’ ಮಳೆ ಮುನ್ಸೂಚನೆ.!

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ನ.27 ರಂದು ಇಂದು ತಮಿಳುನಾಡಿಗೆ ಸೈಕ್ಲೋನ್ ಅಪ್ಪಳಿಸಲಿದ್ದು, ಇದರ ಪರಿಣಾಮ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದಿನಿಂದ 2-3 ದಿನ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಸೈಕ್ಲೋನ್ ಪರಿಣಾಮದಿಂದ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ಎಚ್ಚರಿಸಿದ್ದಾರೆ. ಪಶ್ಟಿಮ ಬಂಗಾಳದಲ್ಲಿನ ವಾಯುಭಾರ ಕುಸಿತ ತೀವ್ರಗೊಂಡಿದೆ. ಹೀಗಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತವುಂಟಾಗಿದ್ದು, ಫೆಂಗಲ್ ಚಂಡಮಾರುತ ತಮಿಳುನಾಡು ಕರಾವಳಿಗೆ ಅಪ್ಪಳಿಸಿದೆ. ಪರಿಣಾಮ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮಿಳುನಾಡು, ಪುದುಚೆರಿ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ತಮಿಳುನಾಡಿನ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನ.27ರಂದು ತಮಿಳುನಾಡಿನ ಎರಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತ ನ.27ರಂದು ತೀವ್ರಗೊಳ್ಳಲಿದ್ದು, ಬಳಿಕ ಉತ್ತರ-ವಾಯುವ್ಯ ಕಡೆ ಚಲಿಸಲಿದೆ. ಬಳಿಕ ಶ್ರೀಲಂಕಾ ಕರಾವಳಿಯತ್ತ ಚಲಿಸಲಿದ್ದು, ಭಾರಿ ಮಳೆಯಾಗಲಿದೆ. ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆಯಾಗಲಿದ್ದು, ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular