HomeKarnatakaRain alert Karnataka : ‘ಫೆಂಗಲ್’ ಸೈಕ್ಲೋನ್ ಎಫೆಕ್ಟ್ : ರಾಜ್ಯದಲ್ಲಿ ಈ ವಾರವೂ ಮುಂದುವರೆಯಲಿದೆ...

Rain alert Karnataka : ‘ಫೆಂಗಲ್’ ಸೈಕ್ಲೋನ್ ಎಫೆಕ್ಟ್ : ರಾಜ್ಯದಲ್ಲಿ ಈ ವಾರವೂ ಮುಂದುವರೆಯಲಿದೆ ‘ಮಳೆ’.!

‘ಫೆಂಗಲ್’ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಕಡೆ ಮಳೆಯಾಗುತ್ತಿದೆ. ಹಲವು ಕಡೆ ಮೋಡ ಕವಿದ ವಾತಾವರಣವಿದೆ. ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಈ ವಾರವೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆ. ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಈ ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಕೂಡ ಮುಂದಿನ 5 ದಿನ ಮಳೆಯಾಗಲಿದೆ.

ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧೆಡೆ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ನಿನ್ನೆ ಯೆಲ್ಲೋ ಅಲರ್ಟ್ ಘೋಷಿಸಿತ್ತು ಬೆಂಗಳೂರು, ಕೋಲಾರ, ತುಮಕೂರು ಮೊದಲಾದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಈ ವಾರವಿಡಿ ಇದೇ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular