HomeKarnatakaRain alert Karnataka : ರಾಜ್ಯದಲ್ಲಿ ಇಂದು ಭಾರಿ 'ಮಳೆ' ಮುನ್ಸೂಚನೆ : 5 ಜಿಲ್ಲೆಗಳಿಗೆ...

Rain alert Karnataka : ರಾಜ್ಯದಲ್ಲಿ ಇಂದು ಭಾರಿ ‘ಮಳೆ’ ಮುನ್ಸೂಚನೆ : 5 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ.!

ಬೆಂಗಳೂರು : ರಾಜ್ಯದಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ ನೀಡಲಾಗಿದ್ದು, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ಜನರಿಗೆ ವರುಣ ಬೇಸರ ತರಿಸಿದ್ದಾನೆ. ರಾಜ್ಯದ ಹಲವು ಕಡೆ ನಿನ್ನೆ ಮಳೆಯಾಗಿದ್ದು, ಇಂದು ಕೂಡ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿರುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular