HomeKarnatakaRain alert Karnataka : ರಾಜ್ಯದಲ್ಲಿ ಆ.6 ರವರೆಗೆ ಭಾರಿ 'ಮಳೆ' ಮುನ್ಸೂಚನೆ : ಈ...

Rain alert Karnataka : ರಾಜ್ಯದಲ್ಲಿ ಆ.6 ರವರೆಗೆ ಭಾರಿ ‘ಮಳೆ’ ಮುನ್ಸೂಚನೆ : ಈ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಆ.6 ರವರೆಗೆ ಭಾರಿ ಮಳೆಯಾಗಲಿದ್ದು, ರೆಡ್, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ . ಕರಾವಳಿ ಭಾಗದಲ್ಲಿ 35 ರಿಂದ 55 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.

ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಬೀದರ್, ಕೊಡಗು, ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರಿ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಇಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular