HomeKarnatakaRain alert Karnataka : ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರಿ ಮಳೆ...

Rain alert Karnataka : ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ವಾಯುಭಾರ ಕುಸಿತ ಹಿನ್ನೆಲೆ ಮುಂದಿನ 3 ದಿನ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಸೇರಿ ಜಿಲ್ಲೆಯ ಹಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಬೆಂಗಳೂರು, ಮೈಸೂರು, ತುಮಕೂರು, ಶಿವಮೊಗ್ಗ, ಧಾರವಾಡ, ದಾವಣಗೆರೆ, ರಾಮನಗರ, ಹಾಸನ, ಮಡಿಕೇರಿ, ಕೊಡಗು, ಮಂಡ್ಯ, ಚಾಮರಾಜನಗರದಲ್ಲೂ ಮಳೆ ಆಗಲಿದೆ.

ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಕಡೆ ಮೋಡ ಕವಿದ ವಾತಾವರಣ ಮತ್ತು ಒಣಹವೆ ಮುಂದುವರೆಯಲಿದೆ. ಬುಧವಾರ ಮತ್ತು ಗುರುವಾರದಿಂದ ರಾಜ್ಯಾದ್ಯಂತ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular