HomeKarnatakaRain alert Karnataka : ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ : ಈ...

Rain alert Karnataka : ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ : ಈ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ..!

ರಾಜ್ಯದಲ್ಲಿ 3 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಅಕ್ಟೋಬರ್ 17ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಅ.17ರವರೆಗೆ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನ ಹಲವೆಡೆ ಮಳೆಯಾಗಲಿದೆ. ಬೆಂಗಳೂರು, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ಟೋಬರ್ 16 ರಿಂದ ಮುಂದಿನ 3 ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ಮಂಡ್ಯದಲ್ಲಿ ಹಾಗೂ ರಾಮನಗರ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಎರಡು ಮೂರು ದಿನಗಳಲ್ಲಿ ತಮಿಳುನಾಡು, ಪಾಂಡಿಚೇರಿ, ಆಂಧ್ರಪ್ರದೇಶಗಳಲ್ಲಿಯೂ ವಾಯುಭಾರ ಕುಸಿತವಾಗಲಿದೆ ಎಂದು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular