HomeKarnatakaRain Alert Karnataka : ರಾಜ್ಯದಲ್ಲಿ ಅ.17 ರವರೆಗೆ ಭಾರಿ ಮಳೆ  : 18 ಜಿಲ್ಲೆಗಳಿಗೆ...

Rain Alert Karnataka : ರಾಜ್ಯದಲ್ಲಿ ಅ.17 ರವರೆಗೆ ಭಾರಿ ಮಳೆ  : 18 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಅ.17 ರವರೆಗೆ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು, ಉಡುಪಿ, ಉತ್ತರ ಕರ್ನಾಟಕ, ಕೊಡಗು, ಬೆಂಗಳೂರು. ಬೆಂಗಳೂರು ಗ್ರಾಮಾಂತರ ಸೇರಿ ವಿವಿಧ ಕಡೆ ಅ.17 ರವರೆಗೆ ಭಾರಿ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗಬಹುದು.18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆಯ ತಜ್ಞ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಮಂಡ್ಯ, ಮೈಸೂರು ಕೊಡಗು ಹಾಗೂ ಹಾಸನ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಅಕ್ಟೋಬರ್ 16, 17ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 17ರ ವರೆಗೆ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ ಎಸ್ ಪಾಟೀಲ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular