ಬೆಂಗಳೂರು : ಏಪ್ರಿಲ್ 18 ರವರೆಗೆ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ವಿಜಯನಗರದಲ್ಲಿ ಭರ್ಜರಿ ಮಳೆಯಾಗಲಿದೆ. ಈ ಬಾರಿ 2025ರ ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಸರಾಸರಿ 19.1 ಮಿ.ಮೀ ಮಳೆಯಾಗಿದೆ.
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಹಲವೆಡೆ ಧಾರಾಕಾರ ಮಳೆಯಾಗಿದೆ.. ಕೆಲವೆಡೆ ವಿದ್ಯುತ್ ವ್ಯತ್ಯಯವಾಗಿದ್ದು, ಸಕಲೇಶಪುರ ತಾಲೂಕಿನ ಹಲವೆಡೆ ವರುಣ ಅಬ್ಬರಿಸಿದ್ದಾನೆ. ಮಿಂಚು-ಗುಡುಗು ಸಮೇತ ಆಲಿಕಲ್ಲು ಮಳೆಯಾಗಿದೆ.
You Might Also Like
TAGGED:ಹವಾಮಾನ ಇಲಾಖೆ