HomeKarnatakaRain alert Karnataka : ರಾಜ್ಯದಲ್ಲಿ ಮೈ ಕೊರೆವ 'ಚಳಿ' ನಡುವೆ ಭಾರಿ 'ಮಳೆ' :...

Rain alert Karnataka : ರಾಜ್ಯದಲ್ಲಿ ಮೈ ಕೊರೆವ ‘ಚಳಿ’ ನಡುವೆ ಭಾರಿ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ.!

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮೈ ಕೊರೆವ ಚಳಿ ಆರಂಭವಾಗಿದೆ. ಮನೆಯಿಂದ ಹೊರಬರಲಾಗದಷ್ಟು ಚಳಿ ಆರಂಭವಾಗಿದ್ದು, ಇದರ ನಡುವೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಡಿಸೆಂಬರ್ 18 ರಿಂದ ಮಳೆಯಾವ ಸಾಧ್ಯತೆ ಇದ್ದು, ಒಂದು ವೇಳೆ ಮತ್ತೆ ಮಳೆಯಾದರೆ ಚಳಿ ಪ್ರಮಾಣ ಕಡಿಮೆಯಾಗಲಿದೆ.

ಉಡುಪಿ, ಉತ್ತರ ಕನ್ನಡ, ದಾವಣಗೆರೆ, ಗದಗ, ಹಾವೇರಿ, ಧರವಾಡ, ಕೊಪ್ಪಳ, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಮಗ್ಳೂರು, ಕೊಡಗು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಐದು ದಿನಗಳ ಬಳಿಕ ಮಳೆಯಾಗುವ ಸಾಧ್ಯತೆ ಇದೆ.ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಡಿಸೆಂಬರ್ 17ರಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular