ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆ ರಾಜ್ಯದ ಈ ಜಿಲ್ಲೆಗಳಲ್ಲಿ ಏ.17 ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಹೆಬ್ಬಾಳ, ಮೆಜೆಸ್ಟಿಕ್ , ಮಲ್ಲೇಶ್ವರಂ ಸೇರಿದಂತೆ ನಗರದ ಹಲವು ಕಡೆ ನಿನ್ನೆ ಭರ್ಜರಿ ಮಳೆಯಾಗಿದೆ. ರಾಜ್ಯದ ಹಲವು ಕಡೆ ಮೋಡ ಕವಿದ ವಾತಾವರಣವಿದ್ದು, ಕೆಲವು ಕಡೆ ಭರ್ಜರಿ ಮಳೆಯಾಗಿದೆ.
ಏ.17 ರವರೆಗೆ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ , ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ..
TAGGED:ಹವಾಮಾನ ಇಲಾಖೆ