HomeLatest NewsRain alert Karnataka : ರಾಜ್ಯದಲ್ಲಿ ಇನ್ನೂ 1 ವಾರ ಬೇಸಿಗೆ ಮಳೆಯ...

Rain alert Karnataka : ರಾಜ್ಯದಲ್ಲಿ ಇನ್ನೂ 1 ವಾರ ಬೇಸಿಗೆ ಮಳೆಯ ಅಬ್ಬರ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ 1 ವಾರ ಬೇಸಿಗೆ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವು ಕಡೆ ಪೂರ್ವ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.ಏಪ್ರಿಲ್ 24 ರಿಂದ 26 ರವರೆಗೆ ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ. ನಂತರ ಒಂದು ವಾರ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರಲಿದ್ದು, ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಕಲ್ಲು ಜಿಲ್ಲೆಯ ಕೆಲವು ಕಡೆ ಗುಡಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.ದಕ್ಷಿಣ ಒಳನಾಡು ಮತ್ತು ಉತ್ತರಗಳ ನಾಡಿನ ಅನೇಕ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಂಭವ ಇದೆ. ಮಂಗಳವಾರ 10ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular