HomeLatest NewsRain alert Karnataka : ರಾಜ್ಯಾದ್ಯಂತ ಇಂದಿನಿಂದ ಮತ್ತೆ ಮಳೆ ಆರ್ಭಟ : ಈ...

Rain alert Karnataka : ರಾಜ್ಯಾದ್ಯಂತ ಇಂದಿನಿಂದ ಮತ್ತೆ ಮಳೆ ಆರ್ಭಟ : ಈ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್ ಘೋಷಣೆ.!

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಜಿಲ್ಲೆ ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ.
ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮೇ 24, 25 ರಂದು 2 ದಿನ ಭಾರಿ ಮಳೆಯಾಗಲಿದೆ. ಹಾಸನ ಮತ್ತು ಕೊಡಗು ಜಿಲ್ಲೆಯಲ್ಲಿ ಮೇ 24 ರಂದು ಮುಂದಿನ 24 ಗಂಟೆವರೆಗೆ ಭಾರಿ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಮೈಸೂರು ಜಿಲ್ಲೆಯಲ್ಲಿ ಎರಡು ದಿನಗಳವರೆಗೆ (ಮೇ 24 ಮತ್ತು 25) ಆರೆಂಜ್ ಅಲರ್ಟ್ ಜಾರಿಯಲ್ಲಿರುತ್ತದೆ.ತುಮಕೂರು, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದ‌ರ್, ವಿಜಯಪುರ, ಕೊಪ್ಪಳ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular