HomeKarnatakaRain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ 'ಮಳೆ'...

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಕಡೆ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಇಂದು ಮಂಗಳವಾರ ಹಾಗೂ ನಾಳೆ ಬುಧವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಇಂದು ಮತ್ತು ನಾಳೆ ಭಾರೀ ಮಳೆ ಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾವೇರಿ, ಕಲಬುರಗಿ, ವಿಜಯಪುರ, ಬೆಳಗಾವಿ, ಬೀದರ್, ಧಾರವಾಡ, ಗದಗ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, , ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ ತುಮಕೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 40-45 ಕಿ.ಮೀ.ನಿಂದ 55 ಕಿ.ಮೀ. ಬೀಸುವ ಸಂಭವವಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular