HomeKarnatakaRain alert : ರಾಜ್ಯದಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ ; ಈ ಜಿಲ್ಲೆಗಳಿಗೆ ಯೆಲ್ಲೋ...

Rain alert : ರಾಜ್ಯದಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು :   ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಇಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕೆಲವೆಡೆ ಭಾರಿ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ಪ್ರಕಾರ, ಬೆಳಗಾವಿ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಲ್ಲೂ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಲ್ಲೂ ಮಳೆ ಸಾಧ್ಯತೆ

ಬೆಂಗಳೂರು ನಗರ ಸೇರಿದಂತೆ ತುಮಕೂರು, ದಾವಣಗೆರೆ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆಯೂ ಇದೆ.

ಆ.26ರಂದು ಮಳೆ ಮುಂದುವರಿಕೆ

ಆಗಸ್ಟ್ 26ರಂದು ಕರಾವಳಿ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವೆಡೆ ಮಳೆಯಾಗಬಹುದು.  ಭಾರಿ ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳಲ್ಲಿ ಸಾರ್ವಜನಿಕರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

https://twitter.com/KarnatakaSNDMC/status/2091824736448004146

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular